ನವದೆಹಲಿ: ಗುರುವಾರದಿಂದ ಜಾರಿಗೆ ಬರುವಂತೆ ಎಲ್ಪಿಜಿ ಸಿಲಿಂಡರ್ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಕಳೆದ ಆರು ತಿಂಗಳಲ್ಲಿ 140 ರೂಪಾಯಿಯಷ್ಟು ಜಾಸ್ತಿಯಾಗಿದೆ. ಜನವರಿ 1 ರಿಂದ ಗ್ಯಾಸ್ ದರ 140 ರೂಪಾಯಿಯಷ್ಟು ಹೆಚ್ಚಾಗಿದ್ದು, ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕ್ ನೀಡಿದೆ.
14.2 ಕೆಜಿ ಸಿಲಿಂಡರ್ ಬೆಲೆ 25.50 ರೂಪಾಯಿ ಏರಿಕೆಯಾಗಿದ್ದು, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 84.5 ರೂಪಾಯಿ ಹೆಚ್ಚಾಗಿದೆ. ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ದರ 1,550 ರೂ. ಆಗಿದೆ.
ಬೆಂಗಳೂರಿನಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿ 597 ರೂ. ಇದ್ದ ದರ 240 ರೂ.ನಷ್ಟು ಜಾಸ್ತಿಯಾಗಿದೆ.