ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಅಗತ್ಯ ವಸ್ತುಗಳ ದರ ಹೆಚ್ಚಳವಾಗಿ ಜನಸಾಮಾನ್ಯರೂ ತತ್ತರಿಸಿದ್ದಾರೆ. ಇದೇ ವೇಳೆ ಸಿಹಿ ಸುದ್ದಿ ಸಿಕ್ಕಿದೆ.
ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಅಡುಗೆ ಅನಿಲ ದರ ಕಡಿಮೆಯಾಗಲಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೂರು ಸಲ ಇಳಿಕೆಯಾಗಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆ 10 ರೂ ಕಡಿಮೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಕಡಿಮೆಯಾಗುತ್ತಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಇಳಿಕೆಯಾಗಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಉನ್ನತ ಅಧಿಕಾರಿ ಹೇಳಿದ್ದಾರೆ.