ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳದಿಂದ ಜನ ತತ್ತರಿಸಿಹೋಗಿದ್ದಾರೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಶಾಕ್ ನೀಡಲಾಗಿದ್ದು, ಗ್ಯಾಸ್ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ.
ಗ್ಯಾಸ್ ಸಿಲಿಂಡರ್ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. 797 ರೂಪಾಯಿ ಇದ್ದ ಸಿಲಿಂಡರ್ ದರ 822 ರೂಪಾಯಿಗೆ ಹೆಚ್ಚಳವಾಗಿದೆ. ಕಮರ್ಷಿಯಲ್ ಸಿಲಿಂಡರ್ ದರ 96 ರೂಪಾಯಿ ಏರಿಕೆಯಾಗಿ 1666 ರೂಪಾಯಿ ತಲುಪಿದೆ ಎಂದು ಹೇಳಲಾಗಿದೆ.