alex Certify BIG BREAKING: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಗ್ಯಾಸ್ ಸಿಲಿಂಡರ್ ದರ ಮತ್ತೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಗ್ಯಾಸ್ ಸಿಲಿಂಡರ್ ದರ ಮತ್ತೆ ಹೆಚ್ಚಳ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ ಎರಡನೇ ಬಾರಿಗೆ ಎಲ್ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.

ಗೃಹ ಬಳಕೆ ಸಿಲಿಂಡರ್ ದರ 3.50 ರೂಪಾಯಿ ಹೆಚ್ಚಳವಾಗಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ದರ 8 ರೂ. ಹೆಚ್ಚಳವಾಗಿದೆ. ಮೇ 7 ರಂದು ಗೃಹ ಬಳಕೆ ಸಿಲಿಂಡರ್ ದರವನ್ನು 50 ರೂಪಾಯಿ ಹೆಚ್ಚಳ ಮಾಡಲಾಗಿತ್ತು.

ಮೇ 19 ರ ಗುರುವಾರ ಎಲ್‌.ಪಿ.ಜಿ. ಸಿಲಿಂಡರ್‌ ಬೆಲೆಯನ್ನು ಪರಿಷ್ಕರಿಸಿದ್ದು, ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು 3.50 ರೂ., ವಾಣಿಜ್ಯ ಸಿಲಿಂಡರ್ ಬೆಲೆ 8 ರೂ. ಹೆಚ್ಚಳ ಮಾಡಿದ್ದು, ಈ ಹೆಚ್ಚಳದ ನಂತರ, ದೇಶಾದ್ಯಂತದ ಬಹುತೇಕ ಎಲ್ಲಾ ನಗರಗಳಲ್ಲಿ ಸಿಲಿಂಡರ್‌ ನ ಬೆಲೆ ಈಗ 1000 ರೂ. ತಲುಪಿದೆ.

ಏರಿಕೆಯೊಂದಿಗೆ ಇಂದಿನಿಂದ ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್‌.ಪಿ.ಜಿ. ಸಿಲಿಂಡರ್‌ ಬೆಲೆ 1003 ರೂ., ಕೋಲ್ಕತ್ತಾದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1029 ರೂ., ಚೆನ್ನೈನಲ್ಲಿ 1018.5 ರೂ.ಆಗಿದೆ.

ಈ ಹಿಂದೆ ಮೇ 7 ರಂದು ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಕೂಡ ದುಬಾರಿಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...