ಆಗಸ್ಟ್ ಮೊದಲ ದಿನ ಜನ ಸಾಮಾನ್ಯರಿಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ದೇಶದ ತೈಲ ಕಂಪನಿಗಳು ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 594 ರೂಪಾಯಿಯಿದೆ.
ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಗಳು ಇತರ ನಗರಗಳಲ್ಲಿಯೂ ಸ್ಥಿರವಾಗಿವೆ. ಜುಲೈ ತಿಂಗಳಲ್ಲಿ ಬೆಲೆಗಳನ್ನು 4 ರೂಪಾಯಿ ಹೆಚ್ಚಿಸಲಾಗಿದೆ. ಜೂನ್ ತಿಂಗಳಿನಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದೆಹಲಿಯಲ್ಲಿ 11.50 ರೂಪಾಯಿ ಏರಿಕೆಯಾಗಿತ್ತು. ಮೇ ತಿಂಗಳಲ್ಲಿ 162.50 ರೂಪಾಯಿ ಇಳಿಕೆ ಕಂಡಿತ್ತು.
ದೆಹಲಿಯಲ್ಲಿ ಯಾವುದೇ ಬದಲಾವಣೆಯಿಲ್ಲದೆ 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1135.50 ರೂಪಾಯಿಯಾಗಿದೆ. ಕೊರೊನಾ ಸಂದರ್ಭದಲ್ಲಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳ್ತಿದ್ದು, ಸಿಲಿಂಡರ್ ಬೆಲೆ ಏರದೆಯಿರುವುದು ಸ್ವಲ್ಪ ನೆಮ್ಮದಿ ನೀಡಿದೆ.