alex Certify ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ, ಇನ್ನೂ ಏರಲಿದೆ ಪೆಟ್ರೋಲ್, ಡೀಸೆಲ್ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ, ಇನ್ನೂ ಏರಲಿದೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇದರೊಂದಿಗೆ ಅಡುಗೆ ಅನಿಲ ದರ ಕೂಡ ಹೆಚ್ಚಳವಾಗುತ್ತಿದೆ.

ಮುಂದಿನ ವಾರ ಮತ್ತೊಂದು ಮಹಾ ಆಘಾತ ಕಾದಿದೆ. ಜಾಗತಿಕ ಮಟ್ಟದಲ್ಲಿ ದರ ಏರಿಕೆಯ ಪರಿಣಾಮ ಪ್ರತಿ ಸಿಲಿಂಡರ್ ದರ ಭಾರಿ ದುಬಾರಿಯಾಗಲಿದೆ ಎಂದು ಹೇಳಲಾಗಿದೆ. ಜುಲೈನಿಂದ ಸಿಲಿಂಡರ್ ದರ 90 ರೂ.ಷ್ಟು ಹೆಚ್ಚಳವಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಯ ಪರಿಣಾಮ ದೇಶದಲ್ಲಿ ಕಂಪನಿಗಳು ದರ ಪರಿಷ್ಕರಣೆ ಮಾಡಲಿವೆ. ಎಲ್ಪಿಜಿ ಮಾರಾಟದಲ್ಲಿ ಪ್ರತಿ ಸಿಲಿಂಡರ್ ಗೆ 100 ರೂಪಾಯಿಗಿಂತ ಹೆಚ್ಚು ನಷ್ಟವಾಗುತ್ತಿದೆ. ಇದರ ಪರಿಣಾಮ ನಷ್ಟ ಸರಿದೂಗಿಸಲು ಎಲ್ಪಿಜಿ ದರ ಮುಂದಿನವಾರ ಭಾರಿ ದುಬಾರಿಯಾಗುವ ಸಾಧ್ಯತೆ ಇದೆ.

ಜಾಗತಿಕ ಮಾನದಂಡವಾದ ಬ್ರೆಂಟ್ ಕಚ್ಚಾತೈಲ 85.42 ಡಾಲರ್ ನಷ್ಟು ಇದೆ. ಸರ್ಕಾರ ಎಲ್ಪಿಜಿ ಸಬ್ಸಿಡಿಯನ್ನೂ ಕೂಡ ತೆಗೆದುಹಾಕಿದ್ದು, ಈಗ ಮತ್ತೆ ಸಬ್ಸಿಡಿ ನೀಡುವ ಸಾಧ್ಯತೆ ಇಲ್ಲವೆನ್ನಲಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಪಿಜಿ ಸಿಲಿಂಡರ್ ದರ ಬಲು ದುಬಾರಿಯಾಗಬಹುದು. ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...