ನವದೆಹಲಿ: ಮೊದಲೇ ಏರಿಕೆ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 266 ರೂಪಾಯಿ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ 2000.50 ರೂಪಾಯಿಗೆ ತಲುಪಿದೆ.
ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ದರ 2000.50 ಪೈಸೆಗೆ ತಲುಪಿದೆ. ದರ ಪರಿಷ್ಕರಣೆಗೆ ಮೊದಲು 1734 ರೂ. ದರ ಇತ್ತು. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.
ಅಕ್ಟೋಬರ್ 1 ರಂದು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಅನ್ನು 1693 ರೂ.ನಿಂದ 1734 ರೂ.ಗೆ ಹೆಚ್ಚಿಸಲಾಗಿತ್ತು. ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ, ದೈನಂದಿನ ವಸ್ತುಗಳೆಲ್ಲವೂ ದುಬಾರಿಯಾಗುತ್ತಿದ್ದು, ಜನರನ್ನು ಕಂಗಾಲಾಗಿಸಿದೆ.