ಬೆಂಗಳೂರು: ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲಕ 160 ರೂ. ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ಹಾಲು ಮಹಾ ಮಂಡಳಿ ವತಿಯಿಂದ ಪಶು ಆಹಾರ ಘಟಕಗಳ ಮೂಲಕ ಪಶು ಆಹಾರ ತಯಾರಿಕೆಗೆ 1,00,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆ ಕೆಟಿಪಿಪಿ ಕಾಯ್ದೆ 4 ಜಿ ಅಡಿಯಲ್ಲಿ ವಿನಾಯಿತಿ ನೀಡಲಾಗಿದ್ದು, ರೈತರು ಬೆಳೆದ ಮೆಕ್ಕೆಜೋಳವನ್ನು ನೇರವಾಗಿ ಖರೀದಿಸುವುದರಿಂದ ರೈತರಿಗೆ ಹೆಚ್ಚಿನ ಬೆಲೆ ಸಿಗಲಿದೆ ಎಂದು ತಿಳಿಸಿದ್ದಾರೆ.