ಬೆಂಗಳೂರು: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ನಿರ್ಧರಿಸಿದೆ. ಪ್ರತಿಟನ್ ಗೆ 15 ಸಾವಿರ ರೂ. ದರದಲ್ಲಿ ರೈತರಿಂದ ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಆದೇಶದ ಮೇರೆಗೆ ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಟನ್ ಗೆ 15 ಸಾವಿರ ರೂಪಾಯಿ ದರದಲ್ಲಿ ರೈತರಿಂದ ನೇರವಾಗಿ ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲಾಗುವುದು. ಕೊರೋನಾ ಕಾರಣದಿಂದ ಬೆಲೆ ಕುಸಿತವಾದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಿದ ಕೆಎಂಎಫ್ 51,259 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಿತ್ತು.
ಈಗ ಟನ್ ಗೆ 15 ಸಾವಿರ ರೂ. ದರದಲ್ಲಿ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು. ಮೆಕ್ಕೆಜೋಳದ ಬೆಲೆ ಕುಸಿತವಾಗಿದ್ದು, ಕೆಎಂಫ್ ನಿರ್ಧಾರದಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.