ನವದೆಹಲಿ: ಸೆಪ್ಟೆಂಬರ್ ನಿಂದ ಕಾರ್ ಗಳ ಬೆಲೆ ಏರಿಕೆ ಮಾಡುವುದಾಗಿ ಭಾರತದ ಪ್ರಮುಖ ವಾಹನ ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.
ತಯಾರಿಕೆ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಿಂದ ಎಲ್ಲಾ ಮಾದರಿಯ ಕಾರ್ ಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ತಿಳಿಸಲಾಗಿದೆ.
ಬಿಡಿಭಾಗಗಳು ಸೇರಿ ವಿವಿಧ ರೀತಿಯಲ್ಲಿ ವಾಹನ ತಯಾರಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷದಿಂದ ಕಂಪನಿಯ ವಾಹನಗಳ ತಯಾರಿಕೆ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿರುವ ಪರಿಣಾಮ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡುವ ಮೂಲಕ ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾವಣೆ ಮಾಡುವುದು ಅನಿವಾರ್ಯವೆಂದು ಹೇಳಲಾಗಿದೆ.