ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ 46 ರೂಪಾಯಿ ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ.
ಇಂದಿನಿಂದ ರೈತರಿಗೆ ಹೆಚ್ಚುವರಿ ಹಣ ನೀಡಲಾಗುತ್ತದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ರೈತರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.