ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ ನೀಡಿ, ಈಗಾಗಲೇ ಸರ್ಕಾರದಿಂದ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದು, ಹೈನುಗಾರಿಕೆ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಲೀಟರ್ ನೀಡುವ 5 ರೂ. ಚಿಂತನೆ ಇದೆ. ಮಂಗಳವಾರ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲು ಖರೀದಿ ಮತ್ತು ಮಾರಾಟ ದರ ಕಡಿಮೆ ಇದ್ದು, ಹಾಲು ಉತ್ಪಾದಕರಿಗೆ ನೆರವಾಗಬೇಕಿದೆ. ಹೀಗಾಗಿ ಹೈನುಗಾರರು ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.