ತುಮಕೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಭಾರಿ ಪ್ರಮಾಣದ ಹಾಲು ಸಂಗ್ರಹವಾಗುತ್ತಿದೆ. ಇದರಿಂದಾಗಿ ಒಂದು ಲೀಟರ್ ಹಾಲಿಗೆ 40 ಎಂಎಲ್ ಹಾಲು ಉಚಿತವಾಗಿ ಕೊಡಲಾಗುತ್ತಿದೆ.
ಕೊರೋನಾ ಲಾಕ್ಡೌನ್ ಕಾರಣದಿಂದ ಮಾರುಕಟ್ಟೆ ಕಳೆದುಕೊಂಡು ಹಾಲು, ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಕುಸಿದಿದೆ. ಇದರಿಂದಾಗಿ ಹಾಲು ಒಕ್ಕೂಟಗಳಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಷ್ಟದಿಂದ ಪಾರಾಗಲು ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಕಡಿತಗೊಳಿಸಿದೆ.
ಜೂನ್ 8 ರಿಂದ ಜಾರಿಗೆ ಬರುವಂತೆ ಒಂದು ಲೀಟರ್ ಹಾಲಿಗೆ ಎರಡು ರೂಪಾಯಿ ಕಡಿತ ಮಾಡಲಾಗಿದೆ. ಮೊದಲೇ ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಹೈನುಗಾರರಿಗೆ ಹಾಲಿನ ದರ ಕಡಿತ ಮಾಡಿರುವುದರಿಂದ ಲೀಟರ್ ಗೆ 2 ರೂ. ಕಡಿಮೆ ಸಿಗಲಿದೆ.