alex Certify ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ಪ್ರತಿ ಲೀಟರ್ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳಿಂದ ಕೆಎಂಎಫ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಒಪ್ಪುವ ಸಾಧ್ಯತೆ ಇಲ್ಲ. ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಉದ್ದೇಶಿಸಿದೆ.

ಕೆಎಂಎಫ್ ನಂದಿನಿ ಹಾಲಿನ ದರವನ್ನು ಲೀಟರ್ ಗೆ 2 ರೂ ನಷ್ಟ ಹೆಚ್ಚಳ ಮಾಡುವ ಸಾಧ್ಯತೆ ಇದ್ದು, ಎಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರ ನಿಯೋಗದೊಂದಿಗೆ ಕೆಎಂಎಫ್ ಅಧ್ಯಕ್ಷರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...