ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಹೀಗಾಗಿ ಪ್ರತಿ ಲೀಟರ್ ಗೆ 2 ರೂಪಾಯಿ ದರ ಹೆಚ್ಚಳಕ್ಕೆ ಕೆಎಂಎಫ್ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.
ಕರ್ನಾಟಕ ರಾಜ್ಯ ಹಾಲು ಮಹಾಮಂಡಳಿ ಎರಡು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಈಗ ಒಕ್ಕೂಟಗಳಿಗೆ ತೊಂದರೆಯಾಗಿರುವುದರಿಂದ ಮತ್ತು ಇಂಧನ ದರ ಹೆಚ್ಚಳ, ಉತ್ಪಾದಕರಿಂದ ಹಾಲಿನ ಖರೀದಿ ದರ ಹೆಚ್ಚಳ ಸೇರಿದಂತೆ ಹಲವು ಖರ್ಚು ಸರಿದೂಗಿಸಲು ಹಾಲಿನ ದರದಲ್ಲಿ 2 ರೂ ಏರಿಕೆ ಮಾಡುವಂತೆ ಕೆಎಂಎಫ್ ನಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.