ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ದರವನ್ನು ಎರಡು ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶುಕ್ರವಾರದಿಂದಲೇ ಪರಿಷ್ಕೃತದ ಜಾರಿಗೆ ಬಂದಿದೆ.
ಪ್ರಸ್ತುತ ಪ್ರತಿ ಲೀಟರ್ ಗೆ 26.85 ರೂ. ನೀಡುತ್ತಿದ್ದು ಇದನ್ನು 28.85 ರೂ.ಗೆ ಹೆಚ್ಚಳ ಮಾಡಲಾಗಿದೆ. ಅಕ್ಟೋಬರ್ 15 ರಂದು ನಡೆದ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ. ಹಾಲು ಉತ್ಪಾದನೆ ವೆಚ್ಚ ಹೆಚ್ಚಾಗಿದೆ. ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಹಾಲಿನ ಉತ್ಪಾದನೆ ಕುಸಿತವಾಗಿದೆ. ಹೀಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಖರೀದಿ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.