
ಶಿವಮೊಗ್ಗ: ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಪರಿಷ್ಕರಿಸಲಾಗಿದ್ದು, ಪ್ರತಿ ಕೆಜಿ ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷ ಶ್ರೀಪಾದರಾವ್ ಅಧ್ಯಕ್ಷತೆಯಲ್ಲಿ ಜನವರಿ 16 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಕೆಜಿ ಹಾಲಿಗೆ 33.71 ರೂ. ದರ ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆಜಿಗೆ 31.85 ರೂ. ದರ ನಿಗದಿಪಡಿಸಲಾಗಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ. ಜನವರಿ 21 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.