ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ.
ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.