ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಹಾಲಿನ ದರ ಹೆಚ್ಚಳ ಮಾಡಲು ಮುಂದಾಗಿದೆ.
ಬೆಂಗಳೂರು ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗುತ್ತದೆ. ಎಷ್ಟು ಹೆಚ್ಚಳ ಮಾಡಬೇಕೆಂಬುದರ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದ್ದಾರೆ.
ಶಿವಮೊಗ್ಗ ಹಾಲು ಒಕ್ಕೂಟ ಸಂಕ್ರಾಂತಿ ಕೊಡುಗೆಯಾಗಿ ಹಾಲು ಉತ್ಪಾದಕರಿಗೆ 2.75 ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡಿದೆ ಎನ್ನಲಾಗಿದ್ದು, ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಉತ್ಪಾದಕರಿಗೆ 24 ದರ ನೀಡುತ್ತಿದ್ದು ಎಷ್ಟು ಹೆಚ್ಚಳ ಮಾಡಬೇಕೆಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.