ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ರಾಜ್ಯೋತ್ಸವದ ಕೊಡುಗೆಯಾಗಿ ನವೆಂಬರ್ ಒಂದರಿಂದ ಹಾಲು ಖರೀದಿ ದರ ಎರಡು ರೂ. ಹೆಚ್ಚಳ ಮಾಡಿದೆ.
ಹೈನುಗಾರರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆಜಿಗೆ ಎರಡು ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟ ದೀಪಾವಳಿ ಮತ್ತು ರಾಜ್ಯೋತ್ಸವದ ಕೊಡುಗೆಯಾಗಿ ಹಾಲಿನ ದರ ಹೆಚ್ಚಳ ಮಾಡಿದ್ದು, ನವೆಂಬರ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಮಂಗಳವಾರ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಲು ಒಕ್ಕೂಟದಿಂದ ಸಂಘಗಳಿಗೆ ಕೊಡುವ ದರ 30.06 ರೂ.ನಿಂದ 32.06 ರೂ.ಗೆ ಹೆಚ್ಚಳವಾಗಲಿದೆ. ಸಂಘಗಳಿಂದ ಹಾಲು ಉತ್ಪಾದಕರಿಗೆ ನೀಡಿರುವ ದರ 28.20 ರೂ.ನಿಂದ 30.20 ರೂ.ಗೆ ಹೆಚ್ಚಳವಾಗಲಿದೆ. ಗ್ರಾಹಕರು ಖರೀದಿಸುವ ಹಾಲಿನ ದರದಲ್ಲಿ ಪರಿಷ್ಕರಣೆ ಮಾಡಿಲ್ಲ.