alex Certify ಹಾಲು ಉತ್ಪಾದಕ ರೈತರಿಗೆ ಶಿವರಾತ್ರಿಗೆ ವಿಶೇಷ ಕೊಡುಗೆ: ಹಾಲಿನ ದರ 2.50 ರೂ. ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕ ರೈತರಿಗೆ ಶಿವರಾತ್ರಿಗೆ ವಿಶೇಷ ಕೊಡುಗೆ: ಹಾಲಿನ ದರ 2.50 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟ(ಶಿಮುಲ್) ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ 2.50 ರೂ. ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್‍ರಾವ್ ತಿಳಿಸಿದರು.

ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ ದರ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಪ್ರಗತಿಯಾಗಿದ್ದು ಫೆ.28 ರಂದು ನಡೆದ ಒಕ್ಕೂಟದ 416 ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಸ್ತುತ ದರ ಕೆ.ಜಿ ಒಂದಕ್ಕೆ 25.63 ರೂ.ಇದ್ದು, ಇದನ್ನು ಪ್ರತಿ ಕೆಜಿ ಗೆ 27.86 ರೂ.ಗೆ ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರ ಮಾ. 1 ರಿಂದ ಜಾರಿಗೆ ಬರಲಿದೆ. ಹೆಚ್ಚು ಹಾಲಿನ ಉತ್ಪಾದನೆ ಮತ್ತು ಹೆಚ್ಚು ಮಾರಾಟದ ಉದ್ದೇಶದಿಂದ ಹಾಗೂ ರೈತರಿಗೆ ಉತ್ತಮ ಆದಾಯ ನೀಡುವ ದೃಷ್ಟಿಯಿಂದ ಒಕ್ಕೂಟ ದರ ಹೆಚ್ಚಳದ ತೀರ್ಮಾನ ಕೈಗೊಂಡಿದೆ.

ಒಕ್ಕೂಟದ ವ್ಯಾಪ್ತಿಯಲ್ಲಿ 1.65 ಲಕ್ಷ ರೈತರಿದ್ದು 1360 ಸೊಸೈಟಿಗಳಿವೆ. ಪ್ರತಿ ದಿನ ಗುಣಮಟ್ಟದ ಹಾಲನ್ನು ರೈತರಿಂದ ಸ್ವೀಕರಿಸಲಾಗುತ್ತಿದೆ. ಈಗ ಹೆಚ್ಚಿಸಿರುವ ದರದಿಂದ ಶಿಮುಲ್ ಪ್ರತಿ ತಿಂಗಳು ರೂ.4.6 ಕೋಟಿ ಹೆಚ್ಚುವರಿ ಹಣ ಪಾವತಿಸಬೇಕಿದೆ.

ನಂದಿನಿ ಹಾಲು ಮತ್ತು ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದಿಂದ ಕೂಡಿದ್ದು, ಗುಣಮಟ್ಟದಲ್ಲಿ  ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ನಂದಿನಿ ಹಾಲಿಗೆ ಹೊರ ರಾಜ್ಯಗಳಿಂದ ಸಹ ಬೇಡಿಕೆ ಹೆಚ್ಚುತ್ತಿದೆ. ಇದೀಗ ದೆಹಲಿ, ಕೇರಳ, ತೆಲಂಗಾಣಗಳಿಗೆ ನಮ್ಮ ಹಾಲು ಹೋಗುತ್ತಿದೆ. ನಂದಿನಿ ಹಾಲನ್ನು ಪ್ರತಿ ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಸಹ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಾಚೇನಹಳ್ಳಿ ಶಿಮುಲ್ ಆವರಣದಲ್ಲಿ 145 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಪೌಡರ್ ಪ್ಲಾಂಟ್ ಸ್ಥಾಪಿಸಲು ಸಂಸದರಿಗೆ ಮನವಿ ಸಲ್ಲಿಸಲಾಗಿದ್ದು, ಸಂಸದರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ದಾವಣಗೆರೆಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಹಾಲಿನ ಘಟಕ ಸ್ಥಾಪಿಸಲು ಸಹ ಮನವಿ ಸಲ್ಲಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...