alex Certify ದೀಪಾವಳಿ ಹೊತ್ತಲ್ಲೇ ರೈತರಿಗೆ ಸಿಹಿ ಸುದ್ದಿ: ರಾಜ್ಯೋತ್ಸವ ಕೊಡುಗೆಯಾಗಿ ನ. 1 ರಿಂದ ಹಾಲು ಖರೀದಿ ದರ 2 ರೂ. ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಹೊತ್ತಲ್ಲೇ ರೈತರಿಗೆ ಸಿಹಿ ಸುದ್ದಿ: ರಾಜ್ಯೋತ್ಸವ ಕೊಡುಗೆಯಾಗಿ ನ. 1 ರಿಂದ ಹಾಲು ಖರೀದಿ ದರ 2 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ರಾಜ್ಯೋತ್ಸವದ ಕೊಡುಗೆಯಾಗಿ ನವೆಂಬರ್ ಒಂದರಿಂದ ಹಾಲು ಖರೀದಿ ದರ ಎರಡು ರೂ. ಹೆಚ್ಚಳ ಮಾಡಿದೆ.

ಹೈನುಗಾರರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆಜಿಗೆ ಎರಡು ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟ ದೀಪಾವಳಿ ಮತ್ತು ರಾಜ್ಯೋತ್ಸವದ ಕೊಡುಗೆಯಾಗಿ ಹಾಲಿನ ದರ ಹೆಚ್ಚಳ ಮಾಡಿದ್ದು, ನವೆಂಬರ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಮಂಗಳವಾರ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಲು ಒಕ್ಕೂಟದಿಂದ ಸಂಘಗಳಿಗೆ ಕೊಡುವ ದರ 30.06 ರೂ.ನಿಂದ 32.06 ರೂ.ಗೆ ಹೆಚ್ಚಳವಾಗಲಿದೆ. ಸಂಘಗಳಿಂದ ಹಾಲು ಉತ್ಪಾದಕರಿಗೆ ನೀಡಿರುವ ದರ 28.20 ರೂ.ನಿಂದ 30.20 ರೂ.ಗೆ ಹೆಚ್ಚಳವಾಗಲಿದೆ. ಗ್ರಾಹಕರು ಖರೀದಿಸುವ ಹಾಲಿನ ದರದಲ್ಲಿ ಪರಿಷ್ಕರಣೆ ಮಾಡಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...