ನವದೆಹಲಿ: ಡಿಜಿಟಲ್ ಮಾಧ್ಯಮ ಪ್ರಕಾಶಕರಿಗೆ ಕೇಂದ್ರದಿಂದ ಮಹತ್ವದ ಸೂಚನೆ ನೀಡಲಾಗಿದ್ದು, 15 ದಿನಗಳ ಒಳಗೆ ಮಾಹಿತಿ ನೀಡಲು ತಿಳಿಸಲಾಗಿದೆ.
ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ಡಿಜಿಟಲ್ ಮಾಧ್ಯಮಗಳು ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ. ಆದರೆ ಕೆಲವು ಮಾಹಿತಿಗಳನ್ನು ಕಡ್ಡಾಯವಾಗಿ 15 ದಿನಗಳ ಒಳಗೆ ಸಲ್ಲಿಸಬೇಕಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಗುರುವಾರ ಈ ಬಗ್ಗೆ ಸೂಚನೆ ನೀಡಿದೆ.
ಡಿಜಿಟಲ್ ಮಾಧ್ಯಮಗಳು, ಸುದ್ದಿ ಪ್ರಸಾರಕರು ಸೇರಿದಂತೆ ಈ ನಿಯಮಗಳ ಅಡಿಯಲ್ಲಿ ಬರುವ ಎಲ್ಲಾ ರೀತಿಯ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಂವಾದ ನಡೆಸಿದ್ದಾರೆ. ನೂತನ ಮಾಹಿತಿ ತಂತ್ರಜ್ಞಾನ ನಿಯಮಾನುಸಾರ ಸ್ವಯಂ ನಿಯಂತ್ರಣ ವ್ಯವಸ್ಥೆ ಆರಂಭಿಸುವ ಪ್ರಕ್ರಿಯೆ ನಡೆದಿದೆ ಎಂದು ಕೆಲವು ಮಾಧ್ಯಮ ಸಂಸ್ಥೆಗಳು ಹೇಳಿವೆ. ಎಲ್ಲಾ ಮಾಧ್ಯಮ ಸಂಸ್ಥೆಗಳು ಪೂರ್ವಭಾವಿಯಾಗಿ ನೋಂದಣಿ ಮಾಡಿಕೊಳ್ಳಬೇಕಿಲ್ಲ. ಆದರೆ ತಮ್ಮ ಸಂಸ್ಥೆಯ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.