alex Certify ರೈತರಿಗೆ ಆರ್ಥಿಕ ನೆರವು: ಖಾತೆಗೆ 5 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಆರ್ಥಿಕ ನೆರವು: ಖಾತೆಗೆ 5 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆಗಸ್ಟ್ 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ತಾವು ಬೆಳೆದ ಕೃಷಿ ಬೆಳೆ ಹಾಗು ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನೋಂದಾಯಿಸಬಹುದಾಗಿದೆ ಎಂದು ಹೇಳಿದ್ದಾರೆ.

ಆರ್ಥಿಕ ನೆರವು:  ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಮುಸುಕಿನ ಜೋಳ ಬೆಳೆದ ರೈತರಿಗೆ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 12087 ಮೆಕ್ಕೆ ಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ರೈತರ ಪೈಕಿ 4732 ರೈತರು ಮಾತ್ರ ಆರ್ಥಿಕ ನೆರವಿಗಾಗಿ ದಾಖಲೆ ಸಲ್ಲಿಸಿದ್ದಾರೆ. ಆದರೆ ಉಳಿದ ರೈತರು ರೈತರು ದಾಖಲಾತಿ ಸಲ್ಲಿಸಲು ಆಗಸ್ಟ್ 15 ಕೊನೆ ದಿನವಾಗಿದ್ದು, ರೈತರು ಕೊನೆಯ ದಿನ ಕಾಯದೇ ಇಂದೇ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...