ನವದೆಹಲಿ: ಮೂರನೇ ತ್ರೈಮಾಸಿಕದಲ್ಲಿ ಉಳಿತಾಯ ಯೋಜನೆ ಬಡ್ಡಿ ದರ ಯಥಾಸ್ಥಿತಿಯಲ್ಲಿದೆ. 2021 -22 ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಹಾಗೂ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಹಣದುಬ್ಬರ, ಕೊರೋನಾ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ನಡುವೆಯೂ ಸಣ್ಣ ಉಳಿತಾಯ ಮೇಲಿನ ಬಡ್ಡಿ ದರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ. ರಾಷ್ಟ್ರೀಯ ಉಳಿತಾಯ ಯೋಜನೆ ಬಡ್ಡಿದರ ಶೇಕಡ 6.8 ರಷ್ಟು ಇದೆ. ಪಿಪಿಎಫ್ ಬಡ್ಡಿದರ ಶೇಕಡಾ 7.1 ರಷ್ಟು ಇದೆ. ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆಗೆ ಶೇಕಡ 6.6 ರಷ್ಟು ಬಡ್ಡಿ ಇದೆ. ಇದೇ ರೀತಿ ಸುಕನ್ಯಾ ಸಮೃದ್ಧಿ ಸೇರಿದಂತೆ ವಿವಿಧ ಉಳಿತಾಯ ಯೋಜನೆ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.