ನವದೆಹಲಿ: ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ಅಡಿಯಲ್ಲಿ ತರಲು ಮೋದಿ ಸರ್ಕಾರ ಸಿದ್ಧವಾಗಿದೆ. ಆದರೆ, ರಾಜ್ಯಗಳು ಒಪ್ಪುವ ಸಾಧ್ಯತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಮೋದಿ ಸರ್ಕಾರವು ಇಂಧನವನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸಿದ್ಧವಾಗಿದೆ. ಪ್ರಮುಖವಾಗಿ ಇಂಧನ ಮತ್ತು ಮದ್ಯ ಆದಾಯ ಉತ್ಪಾದಿಸುವುದರಿಂದ ರಾಜ್ಯಗಳು ಅಂತಹ ಪ್ರಸ್ತಾಪ ಒಪ್ಪುವ ಸಾಧ್ಯತೆಯಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು, ರಾಜ್ಯಗಳು ಒಪ್ಪಿಗೆ ನೀಡಬೇಕು. ರಾಜ್ಯಗಳು ಕ್ರಮ ಕೈಗೊಂಡರೆ, ನಾವು ಸಿದ್ಧರಿದ್ದೇವೆ. ನಾವು ಎಲ್ಲಾ ಸಮಯದಲ್ಲೂ ಸಿದ್ಧರಿದ್ದೇವೆ. ಇದು ನನ್ನ ತಿಳಿವಳಿಕೆಯಾಗಿದೆ. ಅದನ್ನು ಹೇಗೆ ಕಾರ್ಯಗತಗೊಳಿಸುವುದು ಎಂಬುದು ಮತ್ತೊಂದು ಸಮಸ್ಯೆ. ಆ ಪ್ರಶ್ನೆ ವಿತ್ತ ಸಚಿವರಿಗೆ ತಿಳಿಸಬೇಕು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಶ್ರೀನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.