ನವದೆಹಲಿ: ಕ್ವಿಂಟಲ್ ಗೆ 1868 ರೂ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗಿದೆ ಎಂದು ಕೃಷಿ ಸಚಿವಾಲಯ ಮಾಹಿತಿ ನೀಡಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪಂಜಾಬ್ ಮತ್ತು ಹರಿಯಾಣ ರೈತರಿಂದ 48 ಗಂಟೆಗಳ ಅವಧಿಯಲ್ಲಿ 10.53 ಕೋಟಿ ರೂಪಾಯಿ ಮೊತ್ತದ ಭತ್ತ ಖರೀದಿಸಲಾಗಿದೆ. ಉಳಿದ ರಾಜ್ಯಗಳ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಆರಂಭವಾಗಿದೆ.
ಈ ವರ್ಷ ಮುಂಗಾರು ಅವಧಿಯಲ್ಲಿ 495.37 ಲಕ್ಷ ಟನ್ ಭತ್ತ ಖರೀದಿಸುವ ಗುರಿ ಹೊಂದಲಾಗಿದೆ. 52.40 ಕೋಟಿ ರೂ. ಮೊತ್ತದ 5089 ಟನ್ ಕೊಬ್ಬರಿ ಖರೀದಿ ಮಾಡಿದ್ದು ಕರ್ನಾಟಕ ಮತ್ತು ತಮಿಳುನಾಡಿನ ರೈತರಿಗೆ ಪ್ರಯೋಜನವಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.