ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ 10 ಶ್ರೀಮಂತರ ಸಾಲಿಗೆ ಸೇರಿದ್ದಾರೆ. ಅವರ ಆಸ್ತಿ ಮೌಲ್ಯ 4.9 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದಲ್ಲಿ ವಿಶ್ವದ ಶ್ರೀಮಂತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮುಖೇಶ್ ಅಂಬಾನಿ 9 ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಷ್ಯಾದ ಏಕೈಕ ವ್ಯಕ್ತಿ ಮುಖೇಶ್ ಅಂಬಾನಿ ಅವರಾಗಿದ್ದಾರೆ.
ರಿಲಯನ್ಸ್ ಡಿಜಿಟಲ್ ಘಟಕ ಜಿಯೋದಲ್ಲಿ ಇತ್ತೀಚೆಗೆ ಭಾರಿ ಪ್ರಮಾಣದ ಹೂಡಿಕೆಯಾಗಿರುವುದು ಮತ್ತು ಷೇರುಗಳ ಏರಿಕೆಯಾಗಿರುವುದರಿಂದ ಮುಖೇಶ್ ಅಂಬಾನಿ ಆಸ್ತಿ ಮೌಲ್ಯ ಹೆಚ್ಚಳವಾಗಿದೆ.
ರಿಲಯನ್ಸ್ ಮಾರುಕಟ್ಟೆ ಮೌಲ್ಯ ಸೋಮವಾರ 150 ಬಿಲಿಯನ್ ಡಾಲರ್ ಸಮಾರು 11.43 ಲಕ್ಷ ಕೋಟಿ ರೂ. ದಾಟಿದ್ದು ಈ ಸಾಧನೆ ಮಾಡಿದ ಭಾರತದ ಮೊದಲ ಕಂಪನಿ ಆಗಿದೆ.