ಕೊರೊನಾ ಸಂದರ್ಭದಲ್ಲಿ ಲಾಕ್ ಡೌನ್ ನಿಂದಾಗಿ ವಿಶ್ವದ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಕೆಲ ದೊಡ್ಡ ಕಂಪನಿಗಳು ಅಪಾರ ನಷ್ಟ ಅನುಭವಿಸಿದ್ದವು.
ಆದರೆ ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಮಾತ್ರ ಇಂತಹ ಸಂಕಷ್ಟದ ಸಂದರ್ಭದಲ್ಲೂ ತನ್ನ ಸಂಪತ್ತನ್ನು ಏರಿಸಿಕೊಳ್ಳುತ್ತಲೇ ಇದೆ. ಇದಕ್ಕೆ ಕಾರಣ ಫೇಸ್ಬುಕ್, ಗೂಗಲ್ ಸೇರಿದಂತೆ ಕೆಲ ಪ್ರಮುಖ ಕಂಪನಿಗಳು ರಿಲಯನ್ಸ್ ಇಂಡಸ್ಟ್ರೀಸ್ ನಲ್ಲಿ ಹೂಡಿಕೆ ಮಾಡಲು ಮುಂದಾಗಿರುವುದು.
ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ರಿಟೇಲ್ ಉದ್ಯಮದ ಸುಮಾರು 1.47 ಲಕ್ಷ ಕೋಟಿ ರೂಪಾಯಿಗಳ ಪಾಲನ್ನು ಇ-ಕಾಮರ್ಸ್ ದಿಗ್ಗಜ ಕಂಪನಿ ಅಮೆಜಾನ್ ಗೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಿಲಯನ್ಸ್ ಶೇರುಗಳಲ್ಲಿ ಶೇಕಡಾ 7ರಷ್ಟು ಏರಿಕೆ ಕಂಡುಬಂದಿದೆ. ಜೊತೆಗೆ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ 200 ಬಿಲಿಯನ್ ಡಾಲರ್ ಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ಭಾರತದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.