ಕೊರೊನಾ ಕಾರಣಕ್ಕೆ ಭಾರತವೂ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿದ್ದ ಕಾರಣ ಎಲ್ಲರೂ ಆರ್ಥಿಕವಾಗಿ ಭಾರೀ ನಷ್ಟವನ್ನು ಅನುಭವಿಸಿದ್ದರು. ಆದರೆ ಭಾರತದ ಅತಿ ಸಿರಿವಂತ ವ್ಯಕ್ತಿ ಮುಕೇಶ್ ಅಂಬಾನಿ ಮಾತ್ರ ಇದಕ್ಕೆ ಹೊರತಾಗಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಮುಕೇಶ್ ಅಂಬಾನಿ ಪ್ರತಿ ಗಂಟೆಗೆ ಬರೋಬ್ಬರಿ 90 ಕೋಟಿ ರೂಪಾಯಿಗಳನ್ನು ಸಂಪಾದಿಸಿದ್ದಾರೆ ಎಂದು ಹೇಳಲಾಗಿದೆ. ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಆಸ್ತಿ ಮೌಲ್ಯ ಶೇ.73 ರಷ್ಟು ಏರಿಕೆಯಾಗಿ ಈಗ 6.59 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.
ಅಲ್ಲದೆ ಮುಕೇಶ್ ಅಂಬಾನಿ ಸತತ 9ನೇ ಬಾರಿಗೆ ಭಾರತದ ಅತಿ ಸಿರಿವಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಹಿಂದುಜಾ ಸಹೋದರರಿದ್ದು, ಮೂರನೇ ಸ್ಥಾನದಲ್ಲಿ ಶಿವ ನಾಡಾರ್ ಇದ್ದಾರೆ. ನಾಲ್ಕನೇ ಸ್ಥಾನದಲ್ಲಿ ಗೌತಮ್ ಅದಾನಿ ಹಾಗೂ ಐದನೇ ಸ್ಥಾನದಲ್ಲಿ ಅಜೀಮ್ ಪ್ರೇಮ್ ಜಿ ಇದ್ದಾರೆ.