ಬಾಗಲಕೋಟೆ: ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಪೂರೈಕೆ ಮಾಡುವ ಉದ್ದೇಶದೊಂದಿಗೆ ಏಪ್ರಿಲ್ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿಗೆ ತರಲಾಗುವುದು.
ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಈ ಕುರಿತು ಮಾಹಿತಿ ನೀಡಿದ್ದಾರೆ. ಹೊಸ ಮರಳು ನೀತಿ ಅನ್ವಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಪ್ರತಿಟಟ್ ಗೆ 100 ರೂಪಾಯಿ ದರದಲ್ಲಿ ಮರಳು ನೀಡಲಾಗುವುದು. ಆಯಾಭಾಗದ ಗ್ರಾಮ ಪಂಚಾಯಿತಿ, ನಗರಸಭೆ ಕಟ್ಟಡ ಅನುಮತಿಯಲ್ಲಿ ತೋರಿಸಿದಂತೆ ನಿಗದಿತ ಮರಳನ್ನು ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಹಳ್ಳ, ಕೆರೆ, ಅಣೆಕಟ್ಟು ಹಿನ್ನೀರು ಪ್ರದೇಶದಲ್ಲಿ ಮರಳು ತೆಗೆಯದಂತೆ ನಿರ್ಬಂಧ ಹೇರಲಾಗಿದೆ. ಚಿನ್ನ, ಬೆಳ್ಳಿ ದರ ಪ್ರತಿದಿನ ಪ್ರಕಟಿಸುವಂತೆ ಮರಳು ದರವನ್ನು ವಾರಕ್ಕೊಮ್ಮೆ ಪ್ರಕಟಿಸಲಾಗುವುದು. ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರತಿವಾರ ಮರಳು ದರ ಪ್ರಕಟಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಮುಕ್ತವಾಗಿ ಮರಳು ಲಭ್ಯವಾಗಲಿದೆ. ಜೊತೆಗೆ ಸರ್ಕಾರಕ್ಕೆ ಆದಾಯ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.