ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನೀಟ್-ಯುಜಿ ಮರು ಪರೀಕ್ಷೆ ಇಲ್ಲ ಎಂದು ತಿಳಿಸಿದೆ. ಮರು ಪರೀಕ್ಷೆಯಿಂದ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತದೆ. ಹಾಗಾಗಿ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಮಾಸ್ಟರ್ ಮೈಂಡ್ ಓರ್ವನನ್ನು ಬಂಧಿಸಲಾಗಿದೆ. ಈ ನಡುವೆ ಮರು ಪರೀಕ್ಷೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ನೀಟ್-ಯುಜಿ ಮರು ಪರೀಕ್ಷೆ ಇಲ್ಲ ಎಂದು ಆದೇಶ ಹೊರಡಿಸಿದೆ.