ನವದೆಹಲಿ: ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ ಕೆಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ.
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲು ನೀತಿ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.
ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ತೆರಿಗೆದಾರರ ಹಣದಲ್ಲಿ ರಕ್ಷಿಸುವ ಬದಲು ಮಾರುಕಟ್ಟೆ ಬೆಳವಣಿಗೆಗೆ ಅನುಗುಣವಾಗಿ ಸ್ಪರ್ಧಾತ್ಮಕವಾಗಿಸಲು ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದು ಒಳ್ಳೆಯದು ಎಂಬ ಸಲಹೆ ಕೇಳಿಬಂದಿದ್ದು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಈ ಕುರಿತಾಗಿ ಸಲಹೆ ನೀಡಿದೆ ಎನ್ನಲಾಗಿದೆ.