ನವದೆಹಲಿ: ಢಾಬಾ ಮಾಲೀಕರಿಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಢಾಬಾ ಮಾಲೀಕರಿಗೆ ಪೆಟ್ರೋಲ್ ಪಂಪ್ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಇನ್ನೂರರಿಂದ ಮುನ್ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೌಚಾಲಯ ಇರುವುದಿಲ್ಲ ಎಂಬುದರ ಬಗ್ಗೆ ನಾಗರಿಕರು ಗಮನಕ್ಕೆ ತಂದಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಣ್ಣ ಢಾಬಾ ಮಾಲೀಕರು ಪೆಟ್ರೋಲ್ ಪಂಪ್ ಮತ್ತು ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಡಾಬಾ ಮಾಲೀಕರಿಗೆ ಪೆಟ್ರೋಲ್ ಪಂಪ್ ಸ್ಥಾಪನೆ ಮತ್ತು ಶೌಚಾಲಯ ನಿರ್ಮಾಣದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಗಡ್ಕರಿ ಹೇಳಿದ್ದಾರೆ.