ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್ ಮೀಡಿಯಾ ವೇದಿಕೆಗಳನ್ನು ಬ್ಲಾಕ್ ಮಾಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟನೆ ನೀಡಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69 ಎ ಅಡಿಯಲ್ಲಿ ದೇಶದ ಶಾಂತಿಗೆ ಭಂಗ ತರುವಂತಹ ಸೋಶಿಯಲ್ ಮೀಡಿಯಾ ವಿಚಾರಗಳನ್ನು ಸರ್ಕಾರವು ನಿರ್ಬಂಧಿಸುತ್ತದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲಿಖಿತ ರೂಪದಲ್ಲಿ ರಾಜ್ಯ ಸಭೆಗೆ ಮಾಹಿತಿ ನೀಡಿದ್ದಾರೆ .
ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯು ಆಳವಾಗಿ ತಳವೂರಿದೆ. ಇಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ಮೂಲಭೂತ ಹಕ್ಕು ಇದೆ. ಹಾಗಂತ ಯಾವುದೇ ಸಾಮಾಜಿಕ ಮಾಧ್ಯಮವು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಧಕ್ಕೆ ತರುವಂತೆ ಇರಬಾರದು ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.