ನವದೆಹಲಿ: ಹೋಟೆಲ್ ಮತ್ತು ರೆಸ್ಟೋರೆಂಟ್ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೋಟೆಲ್ ಗಳಲ್ಲಿ ಗ್ರಾಹಕರ ಬಿಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದನ್ನು ಸರ್ಕಾರ ನಿಷೇಧಿಸಿದೆ.
ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ. ಈ ಹಿಂದೆಯೇ ಸಚಿವಾಲಯದಿಂದ ಸ್ಪಷ್ಟನೆ ನೀಡಿದ್ದರೂ ಗೊಂದಲ ಬಗೆಹರಿದಿರಲಿಲ್ಲ. ಈ ಕುರಿತಾಗಿ ಕಾನೂನು ರೂಪಿಸುವವರೆಗೆ ಸೇವಾ ಶುಲ್ಕ ಕಾನೂನುಬದ್ಧ ಎಂದು ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ವಾದಿಸಿತ್ತು.
ಹೀಗಾಗಿ ಸ್ಪಷ್ಟ ಮಾರ್ಗಸೂಚಿ ಹೊರಡಿಸಲಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರ ಬಿಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದನ್ನು ಸರ್ಕಾರ ನಿಷೇಧಿಸಿದೆ. ಗ್ರಾಹಕರಿಗೆ ರಾಷ್ಟ್ರೀಯ ಗ್ರಾಹಕ ಹೆಲ್ಪ್ಲೈನ್ ನಲ್ಲಿ ದೂರು ಸಲ್ಲಿಸಲು ಹಕ್ಕು ಇದೆ ಎಂದು ಹೇಳಲಾಗಿದೆ.