ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮೀ’ ಹಣ ಬಂದಿಲ್ಲ ಅಂದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವರಿಗೆ ಮೊದಲ ಕಂತು ಬಂದಿದ್ದು, ಹಲವರಿಗೆ ಇನ್ನೂ ಹಣ ಖಾತೆಗೆ ಜಮಾ ಆಗಿಲ್ಲ.

ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ಅಥವಾ ಬೇರೆ ಗೃಹಲಕ್ಷ್ಮೀ ಯೋಜನೆಯ ಬೇರೆ ಏನಾದರೂ ಸಮಸ್ಯೆ ಇದ್ದರೆ ನೀವು 1906 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗುತ್ತಿದೆ. ಆದರೆ ಕೆಲವರಿಗೆ ಇನ್ನೂ ಹಣ ಜಮೆ ಆಗಿಲ್ಲ. ಕೆಲವರಿಗೆ ಹಣ ವಿಳಂಬ ಆಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read