ಬೆಂಗಳೂರು : 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ(ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿ ದಾಖಲಾತಿ ಕೈಗೊಂಡಿದೆ. ತದನಂತರ ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಹಾಗೂ ದಾಖಲಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿರುತ್ತಾರೆ.
ಆದ್ದರಿಂದ, 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿರುವ ಸೀಟುಗಳಿಗೆ ಹಾಸ್ಟೆಲ್ಗಳ ಅನುಸಾರ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಸೇವೆಯನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ದಿನಾಂಕ:24.12.2024ರಿಂದ ಪ್ರಾರಂಭಿಸಿ ದಿನಾಂಕ:10.01.2025ರವರೆಗೆ ಅರ್ಜಿ ಆಹ್ವಾನಿಸಿದ್ದು, ಜಿಲ್ಲಾಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಯಮಾನುಸಾರ ಸೀಟುಗಳ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತ ನಿರ್ದೇಶನಾಲಯ ಪ್ರಕಟಣೆ ತಿಳಿಸಿದೆ.