ಬೆಂಗಳೂರು : ನವೆಂಬರ್ 16 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.
ನವೆಂಬರ್ 16 ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಲೋಕಸಭೆ ಚುನಾವಣೆ, ಆಪರೇಷನ್ ಹಸ್ತ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ , ವಿದ್ಯುತ್ ಸಮಸ್ಯೆ ಬಗ್ಗೆಯೂ ಕೂಡ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.