ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು, ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ.
ಅಡುಗೆ ಎಣ್ಣೆ ದರ ಕೂಡ ಭಾರೀ ಏರಿಕೆಯಾಗಿದೆ. ಪಾಮ್ ಆಯಿಲ್, ಸೂರ್ಯಕಾಂತಿ, ಶೇಂಗಾ ಎಣ್ಣೆ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ದಿಢೀರ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಅಡುಗೆ ಎಣ್ಣೆ ಬೆಲೆಯೇರಿಕೆಯಿಂದ ಜನರಿಗೆ ನುಂಗಲಾರದ ತುತ್ತಾಗಿದೆ. ಅದರಲ್ಲಿಯೂ ಬಡವರು, ಮಧ್ಯಮ ವರ್ಗದವರಿಗೆ ಅಡುಗೆ ಎಣ್ಣೆ ದರ ಗಗನಕ್ಕೇರಿರುವುದು ಬಿಸಿತುಪ್ಪವಾಗಿ ಪರಿಣಮಿಸಿದೆ.
ಸೂರ್ಯಕಾಂತಿ ಎಣ್ಣೆ ಒಂದು ಲೀಟರ್ ಗೆ 120 ರಿಂದ 170 ರೂಪಾಯಿವರೆಗೆ ಹೆಚ್ಚಳವಾಗಿದೆ. ಶೇಂಗಾ ಎಣ್ಣೆ 160 ರೂಪಾಯಿಂದ 200 ರೂಪಾಯಿಗೆ ಏರಿಕೆಯಾಗಿದ್ದು, ತಾಳೆ ಎಣ್ಣೆ 92 ರೂಪಾಯಿಂದ 135 ರೂಪಾಯಿಗೆ ಹೆಚ್ಚಳವಾಗಿದೆ.