ನವದೆಹಲಿ: ದೇಶದ ರೈತರಿಗೆ ಅನುಕೂಲವಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ರೂಪಿಸಿದೆ.
ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ‘ಒನ್ ನೇಷನ್ ಒನ್ ಮಾರ್ಕೆಟ್’ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ರೈತರಿಗಾಗಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ‘ಒನ್ ನೇಷನ್ ಒನ್ ಮಾರ್ಕೆಟ್’ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿ ಎಲ್ಲಿ ಬೇಕಾದರೂ ಬೆಳೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ರೈತರೇ ಬೆಳೆಗಳಿಗೆ ದರ ನಿಗದಿ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.