ಹೈದರಾಬಾದ್‌ನ ಸಂತೋಷ್ ನಗರ ಕಾಲೋನಿಯ ಅಪಾರ್ಟ್‌ಮೆಂಟ್‌ನಲ್ಲಿ ಲಿಫ್ಟ್‌ನಲ್ಲಿ ಸಿಲುಕಿ ನಜ್ಜುಗುಜ್ಜಾಗಿ ಒಂದು ವರ್ಷದ ಮಗು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಸುರೇಂದರ್ ಎಂಬ ಮಗು ಈ ದುರ್ಘಟನೆಯಲ್ಲಿ ಮೃತಪಟ್ಟಿದೆ. ಮಗುವಿನ ತಂದೆ ಹಾಸ್ಟೆಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಕುತುಬ್ ಶಾಹಿ ಮಸೀದಿಯ ಬಳಿಯ ಮುಸ್ತಫಾ ಅಪಾರ್ಟ್‌ಮೆಂಟ್ಸ್‌ನಲ್ಲಿ ವಾಸಿಸುತ್ತಿದ್ದರು.
ಮಗು ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ, ಮಗುವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ, ಲಿಫ್ಟ್‌ನಲ್ಲಿ ಸಿಲುಕಿ ಅಥವಾ ಲಿಫ್ಟ್ ಶಾಫ್ಟ್‌ನಲ್ಲಿ ಬಿದ್ದು ದುರಂತ ಸಾವು ಸಂಭವಿಸಿದಂತಹ ಪ್ರಕರಣಗಳು ವರದಿಯಾಗಿವೆ.