ಬೆಂಗಳೂರು: ಕಳೆದ ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ಒಂದು ಕೆಜಿ ಈರುಳ್ಳಿ ದರ 100 ರಿಂದ 150 ರೂಪಾಯಿವರೆಗೆ ಏರಿಕೆಯಾಗಿ ಬೆಳೆಗಾರರಿಗೆ ಉತ್ತಮ ಧಾರಣೆ ದೊರೆತಿತ್ತು.
ಈಗ ಒಂದು ಮೂಟೆ ಈರುಳ್ಳಿ ದರ ಕೇವಲ 250 ರೂಪಾಯಿ ಇದೆ. 50 ಕೆಜಿ ಈರುಳ್ಳಿ ಚೀಲದ ದರ 250 ರೂ.ಗೆ ಮಾರಾಟವಾಗುತ್ತಿದ್ದು ಬೆಲೆ ಇಳಿಕೆಯಾಗಿರುವುದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ.
ಒಂದು ಕ್ವಿಂಟಾಲ್ ಈರುಳ್ಳಿಗೆ 500 ರಿಂದ 1400 ರೂಪಾಯಿ ಇದೆ. ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಮಾರುಕಟ್ಟೆಗೆ ಬರುತ್ತಿದೆ. ಅಲ್ಲದೆ, ರಾಜ್ಯದ ಚಿತ್ರದುರ್ಗ, ಗದಗ ಮೊದಲಾದ ಕಡೆಯಿಂದ ಗುಣಮಟ್ಟದ ಈರುಳ್ಳಿ ಪೂರೈಕೆಯಾಗುತ್ತಿದ್ದು ಇದರಿಂದ ಮಾರುಕಟ್ಟೆಯಲ್ಲಿ ಧಾರಣೆ ಕಡಿಮೆಯಾಗಿದೆ.
ದಲ್ಲಾಳಿಗಳು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಖರೀದಿಸಿ ದಾಸ್ತಾನು ಮಾಡಿದರೆ ನಂತರ ದರ ಹೆಚ್ಚಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಲಾಗಿದೆ.