ನವದೆಹಲಿ: ದೇಶಿಯವಾಗಿ ಉತ್ಪಾದನೆ ಹೆಚ್ಚಳ ಮತ್ತು ಆಮದು ಪ್ರಮಾಣದಲ್ಲಿ ಕಡಿತಗೊಳಿಸುವುದು ಹಾಗೂ ಉದ್ಯೋಗ ಸೃಷ್ಟಿ, ಆರ್ಥಿಕ ಚೇತರಿಕೆ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರೋತ್ಸಾಹ ಯೋಜನೆ ಘೋಷಿಸಿದೆ.
2 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡುವ ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಲಾಗಿದೆ. ಇದೇ ವೇಳೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 20 ಶತಕೋಟಿ ಡಾಲರ್ ಮೊತ್ತದ ಹೊಸ ಉತ್ತೇಜನ ಕ್ರಮಗಳನ್ನು ಕೇಂದ್ರ ಸರ್ಕಾರ ಈ ವಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಮುಖ ಆದ್ಯತಾ ವಲಯಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಸುಳಿವು ನೀಡಿದ್ದು, ಇನ್ನೊಂದು ಸುತ್ತು ಉತ್ತೇಜಕ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಉನ್ನತ ಅಧಿಕಾರಿಗಳು ಗುರುವಾರ ಪ್ಯಾಕೇಜ್ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಬಳಿಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.