
ಶಿವಮೊಗ್ಗ: 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ಭತ್ತ ಖರೀದಿದಲು ರೈತರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.
ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಭತ್ತವನ್ನು ನೀಡಲು ಇಚ್ಛಿಸುವ ರೈತರು ಖರೀದಿ ಕೇಂದ್ರಗಳಲ್ಲಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಪತ್ರ, ಆಧಾರ್ ಸಂಖ್ಯೆ ಮತ್ತು ತಮ್ಮ ಬ್ಯಾಂಕ್ ಖಾತೆಯ ಎಲ್ಲಾ ವಿವರಗಳು ಇರುವ ಪಾಸ್ ಪುಸ್ತಕದ ಇತ್ತೀಚಿನ ದೃಢೀಕೃತ ಪ್ರತಿಯೊಂದಿಗ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇರುವ ಭತ್ತ ಖರೀದಿ ಕೇಂದ್ರಗಳು: ಶಿವಮೊಗ್ಗ ಸೇರಿದಂತೆ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಆವರಣದಲ್ಲಿರುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಸಲಾಗುತ್ತಿದ್ದು, ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.