ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ದೀಪಾವಳಿ ಬಳಿಕ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹಬ್ಬ ಮುಗಿದ ನಂತರ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಉತ್ತಮ ಗುಣಮಟ್ಟದ ಭಕ್ತಕ್ಕೆ ಕ್ವಿಂಟಲ್ ಗೆ 1960 ರೂಪಾಯಿ ಮತ್ತು ಸಾಮಾನ್ಯ ಭತ್ತಕ್ಕೆ 1940 ರೂಪಾಯಿ ದರ ನಿಗದಿಪಡಿಸಿದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ಖರೀದಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.