ಭತ್ತ ಕ್ವಿಂಟಾಲ್ ಗೆ 2040 ರೂ., ರಾಗಿ 3578 ರೂ. ಬೆಂಬಲ ಬೆಲೆಯಲ್ಲಿ ಖರೀದಿ

ಮಡಿಕೇರಿ: ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್ 15 ರಿಂದ ನೋಂದಣಿ ಆರಂಭವಾಗಿದೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ  ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‍ಗೆ 3578 ರೂ. ನಿಗದಿಪಡಿಸಲಾಗಿದೆ. ಕೆಲವೇ ದಿನಗಳಲ್ಲಿ ಭತ್ತ/ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read