ನವದೆಹಲಿ: ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಕ್ರಿಪ್ಟೋ ಕರೆನ್ಸಿಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ.
ಕ್ರಿಪ್ಟೋಕರೆನ್ಸಿ ಗೆ ಸಂಬಂಧಿಸಿದಂತೆ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸಭೆ ನಡೆದಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಜ್ಞರು, ಉದ್ಯಮಿಗಳ ಸಂಘಟನೆಗಳ ಸದಸ್ಯರು, ಪ್ರತಿನಿಧಿಗಳು ಭಾಗಿಯಾಗಿದ್ದರು. ಕ್ಟಿಪ್ಟೋ ಕರೆನ್ಸಿಯನ್ನು ತಡೆಯಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ತಜ್ಞರು, ಉದ್ಯಮಿಗಳ ಸಂಘಟನೆಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಕರೆನ್ಸಿಯನ್ನು ನಿಲ್ಲಿಸಲು ಆಗದು, ಆದರೆ, ನಿಯಂತ್ರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕ್ರಿಪ್ಟೋಕರೆನ್ಸಿಯನ್ನು ನಿಯಂತ್ರಿಸಲು ನಿಯಂತ್ರಕ ಕಾರ್ಯವಿಧಾನವನ್ನು ಜಾರಿಗೆ ತರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಉದ್ಯಮ ಸಂಘಗಳು ಮತ್ತು ಮಧ್ಯಸ್ಥಗಾರರಿಗೆ ನಿಯಂತ್ರಕ ಯಾರು ಎಂಬುದರ ಬಗ್ಗೆ ಸ್ಪಷ್ಟವಾಗಿಲ್ಲ. ಹೂಡಿಕೆದಾರರ ಹಣದ ಭದ್ರತೆ ಬಗ್ಗೆ ಎಂದು ತಜ್ಞರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆನ್ನಲಾಗಿದೆ.