ಬೆಂಗಳೂರು : ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ರೈತರಿಗೆ ಪರಿಹಾರ ಪಾವತಿ ಮಾಡುವ ವೇಳೆ ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಮಾಡಲಾಗುತ್ತದೆ ಎಂದರು. ಹೀಗಾಗಿ ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಿ, ಅಧಿಕಾರಿಗಳ ಲಾಭದ ಹಿತಾಸಕ್ತಿ ಹಾಗೂ ಅಕ್ರಮದ ಹಿನ್ನೆಲೆ ನೈಜ್ಯ ಫಲಾನುಭವಿಗಳಿಗೆ ಪರಿಹಾರದ ಹಣ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಮೀನಿನ ಮಾಹಿತಿ ಹಂಚಿಕೊಳ್ಳಿ. ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.