ಫ್ರಾಂಕ್ ಫರ್ಟ್: ಕಚ್ಚಾತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು ಎಂದು ಪೆಟ್ರೋಲಿಯಂ ರಫ್ತುದಾರ ದೇಶಗಳ ಒಕ್ಕೂಟವಾಗಿರುವ ಒಪೆಕ್ ತಿಳಿಸಿದೆ.
ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತವಾಗಿತ್ತು. ಆ ಸಂದರ್ಭದಲ್ಲಿ ಒಪೆಕ್ ತೈಲ ರಫ್ತುದಾರ ರಾಷ್ಟ್ರಗಳ ಒಕ್ಕೂಟ ತೈಲ ಉತ್ಪಾದನೆಯನ್ನು ಕಡಿಮೆ ಮಾಡಿದ್ದು, ಈಗ ಉತ್ಪಾದನೆ ಹೆಚ್ಚಳಕ್ಕೆ ಮುಂದಾಗಿದೆ.
ತೈಲ ಉತ್ಪಾದನೆ ಕಡಿಮೆ ಮಾಡಿದ ಸಂದರ್ಭದಲ್ಲಿ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ಈಗ ತೈಲ ಉತ್ಪಾದಕ ರಾಷ್ಟ್ರಗಳು ಪ್ರತಿ ತಿಂಗಳು ಸಭೆ ಸೇರುವ ಜೊತೆಗೆ ತೈಲ ಉತ್ಪಾದನೆ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡಿದೆ. ಮೇ ತಿಂಗಳಲ್ಲಿ ಪ್ರತಿದಿನ 3.50 ಲಕ್ಷ ಬ್ಯಾರೆಲ್ ತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು. ಜುಲೈ ವೇಳೆಗೆ ಪ್ರತಿದಿನ 4 ಲಕ್ಷ ಬ್ಯಾರೆಲ್ ನಷ್ಟು ತೈಲ ಉತ್ಪಾದನೆ ಹೆಚ್ಚಿಸಲು ಒಪೆಕ್ ತೀರ್ಮಾನಿಸಿದೆ.